Psalms · chapter 105 · verse 15
Psalm 105:15 in Kannada
ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
Nanna abhishiktarannu muttabediri, nanna pravaadigalige kedu maadabediri endu helidanu.
Psalm 105:15 in English
- King James Version (KJV)
- [Saying], Touch not mine anointed, and do my prophets no harm.
- World English Bible (WEB)
- “Don’t touch my anointed ones! Do my prophets no harm!”
- American Standard Version (ASV)
- [Saying], Touch not mine anointed ones, And do my prophets no harm.
- Bible in Basic English (BBE)
- Saying, Put not your hand on those who have been marked with my holy oil, and do my prophets no wrong.
- Darby Translation (DBY)
- [Saying,] Touch not mine anointed ones, and do my prophets no harm.
- Webster's Bible (WBS)
- [Saying] , Touch not my anointed, and do my prophets no harm.
- Young's Literal Translation (YLT)
- 'Strike not against Mine anointed, And to My prophets do not evil.'
Read in context
- 13ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.
- 14ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
- 15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- 16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
- 17ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
Cross references
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
- Genesis 26:11 ಆದಿಕಾಂಡ 26:11ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
- Genesis 20:7 ಆದಿಕಾಂಡ 20:7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Genesis 49:8–33 ಆದಿಕಾಂಡ 49:8–33ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು. ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು. ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ. ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು. ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು. ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ. ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು. ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು. ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ. ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ. ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು. ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ, ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.) ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ. ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು. ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು. ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು. ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Genesis 48:19–20 ಆದಿಕಾಂಡ 48:19–20ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- Genesis 27:39–40 ಆದಿಕಾಂಡ 27:39–40ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು. ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.