Psalms · chapter 105 · verse 16
Psalm 105:16 in Kannada
ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
Deshada mele baravannu baramaadi aahaara vemba oorukolannu muridanu.
Psalm 105:16 in English
- King James Version (KJV)
- Moreover he called for a famine upon the land: he brake the whole staff of bread.
- World English Bible (WEB)
- He called for a famine on the land. He destroyed the food supplies.
- American Standard Version (ASV)
- And he called for a famine upon the land; He brake the whole staff of bread.
- Bible in Basic English (BBE)
- And he took away all food from the land, so that the people were without bread.
- Darby Translation (DBY)
- And he called for a famine upon the land; he broke the whole staff of bread.
- Webster's Bible (WBS)
- Moreover he called for a famine upon the land: he broke the whole staff of bread.
- Young's Literal Translation (YLT)
- And He calleth a famine on the land, The whole staff of bread He hath broken.
Read in context
- 14ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
- 15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- 16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
- 17ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
- 18ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
Cross references
- Ezekiel 4:16 ಯೆಹೆಜ್ಕೇಲನು 4:16ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- Isaiah 3:1 ಯೆಶಾಯ 3:1ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
- Genesis 41:54 ಆದಿಕಾಂಡ 41:54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- Acts 7:11 ಅಪೊಸ್ತಲರ ಕೃತ್ಯಗಳು 7:11ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
- 2 Kings 8:1 2 ಅರಸುಗಳು 8:1ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- Genesis 47:13 ಆದಿಕಾಂಡ 47:13ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
- Haggai 1:10–11 ಹಗ್ಗಾಯ 1:10–11ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- Haggai 2:17 ಹಗ್ಗಾಯ 2:17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Amos 7:1–4 ಆಮೋಸ 7:1–4ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು. ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು. ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
- Genesis 41:25–32 ಆದಿಕಾಂಡ 41:25–32ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ. ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು. ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು. ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ. ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ. ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು. ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು. ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.