Psalms · chapter 105 · verse 2
Psalm 105:2 in Kannada
ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
Aatanige haadiri, aatanige keertane haadiri; aatana adbhuta kriyegala vishayavaagi maatanaadiri.
Psalm 105:2 in English
- King James Version (KJV)
- Sing unto him, sing psalms unto him: talk ye of all his wondrous works.
- World English Bible (WEB)
- Sing to him, sing praises to him! Tell of all his marvelous works.
- American Standard Version (ASV)
- Sing unto him, sing praises unto him; Talk ye of all his marvellous works.
- Bible in Basic English (BBE)
- Let your voice be sounding in songs and melody; let all your thoughts be of the wonder of his works.
- Darby Translation (DBY)
- Sing unto him, sing psalms unto him; meditate upon all his wondrous works.
- Webster's Bible (WBS)
- Sing to him, sing psalms to him: talk ye of all his wondrous works.
- Young's Literal Translation (YLT)
- Sing ye to Him — sing praise to Him, Meditate ye on all His wonders.
Read in context
- 1ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
- 2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- 3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
- 4ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
Cross references
- Isaiah 12:5–6 ಯೆಶಾಯ 12:5–6ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 119:27 ಕೀರ್ತನೆಗಳು 119:27ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
- Psalm 77:12 ಕೀರ್ತನೆಗಳು 77:12ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
- Psalm 98:5 ಕೀರ್ತನೆಗಳು 98:5ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.
- Psalm 98:1 ಕೀರ್ತನೆಗಳು 98:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- Psalm 78:4–6 ಕೀರ್ತನೆಗಳು 78:4–6ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- Exodus 13:8–9 ವಿಮೋಚನಕಾಂಡ 13:8–9ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ. ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Isaiah 42:10–12 ಯೆಶಾಯ 42:10–12ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- Judges 5:3 ನ್ಯಾಯಸ್ಥಾಪಕರು 5:3ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.
- Luke 24:14–53 ಲೂಕನು 24:14–53ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು. ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು. ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ. ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು. ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು. ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ; ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು. ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ; ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು. ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು. ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ, ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು. ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು. ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು. ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು. ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು. ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು. ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು. ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು. ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು. ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು. ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು. ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು. ಆತನು ತಕ್ಕೊಂಡು ಅವರ ಮುಂದೆ ತಿಂದನು. ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು. ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು. ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು. ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್. ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
- Psalm 47:6–7 ಕೀರ್ತನೆಗಳು 47:6–7ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.