Psalms · chapter 105 · verse 25
Psalm 105:25 in Kannada
ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
Aatanu aa deshadavara hrudayavannu maarpa disiddarinda avaru aatana janarannu dveshisi aatana sevakarannu kuyuktiyinda nadisidaru.
Psalm 105:25 in English
- King James Version (KJV)
- He turned their heart to hate his people, to deal subtilly with his servants.
- World English Bible (WEB)
- He turned their heart to hate his people, to conspire against his servants.
- American Standard Version (ASV)
- He turned their heart to hate his people, To deal subtly with his servants.
- Bible in Basic English (BBE)
- Their hearts were turned to hate against his people, so that they made secret designs against them.
- Darby Translation (DBY)
- He turned their heart to hate his people, to deal subtilly with his servants.
- Webster's Bible (WBS)
- He turned their heart to hate his people, to deal subtilly with his servants.
- Young's Literal Translation (YLT)
- He turned their heart to hate His people, To conspire against His servants.
Read in context
- 23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- 24ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
- 25ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
- 26ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
- 27ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
Cross references
- Acts 7:19 ಅಪೊಸ್ತಲರ ಕೃತ್ಯಗಳು 7:19ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Exodus 9:16 ವಿಮೋಚನಕಾಂಡ 9:16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
- Exodus 1:16 ವಿಮೋಚನಕಾಂಡ 1:16ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
- Romans 9:17–19 ರೋಮಾಪುರದವರಿಗೆ 9:17–19ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ. ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು. ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
- Exodus 10:1 ವಿಮೋಚನಕಾಂಡ 10:1ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
- Exodus 4:21 ವಿಮೋಚನಕಾಂಡ 4:21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
- Deuteronomy 2:30 ಧರ್ಮೋಪದೇಶಕಾಂಡ 2:30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
- Exodus 1:8–14 ವಿಮೋಚನಕಾಂಡ 1:8–14ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು. ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ; ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು. ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು. ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು. ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- Exodus 2:23 ವಿಮೋಚನಕಾಂಡ 2:23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.