Psalms · chapter 105 · verse 27
Psalm 105:27 in Kannada
ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
Ivaru aatana gurutugalannoo haamana deshadalli adbhutagalannoo avarolage torisidaru.
Psalm 105:27 in English
- King James Version (KJV)
- They shewed his signs among them, and wonders in the land of Ham.
- World English Bible (WEB)
- They performed miracles among them, and wonders in the land of Ham.
- American Standard Version (ASV)
- They set among them his signs, And wonders in the land of Ham.
- Bible in Basic English (BBE)
- He let his signs be seen among the people, and his wonders in the land of Ham.
- Darby Translation (DBY)
- They set his signs among them, and miracles in the land of Ham.
- Webster's Bible (WBS)
- They showed his signs among them, and wonders in the land of Ham.
- Young's Literal Translation (YLT)
- They have set among them the matters of His signs, And wonders in the land of Ham.
Read in context
- 25ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
- 26ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
- 27ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
- 28ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
- 29ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
Cross references
- Psalm 78:43–51 ಕೀರ್ತನೆಗಳು 78:43–51ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ. ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು. ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು. ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- Nehemiah 9:10–11 ನೆಹೆಮೀಯ 9:10–11ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- Isaiah 63:11–12 ಯೆಶಾಯ 63:11–12ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
- Jeremiah 32:20–21 ಯೆರೆಮೀಯ 32:20–21ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- Psalm 106:22 ಕೀರ್ತನೆಗಳು 106:22ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Psalm 105:28 ಕೀರ್ತನೆಗಳು 105:28ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
- Psalm 135:8–9 ಕೀರ್ತನೆಗಳು 135:8–9ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು. ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Exodus 7:1–11 ವಿಮೋಚನಕಾಂಡ 7:1–11ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು. ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು. ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು. ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು. ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು. ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು. ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ-- ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು. ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು. ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.