Psalms · chapter 105 · verse 32
Psalm 105:32 in Kannada
ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.
Avara malegaagi kalmaleyannoo agnijvaalegalannoo deshadalli baramaadidanu.
Psalm 105:32 in English
- King James Version (KJV)
- He gave them hail for rain, [and] flaming fire in their land.
- World English Bible (WEB)
- He gave them hail for rain, with lightning in their land.
- American Standard Version (ASV)
- He gave them hail for rain, [And] flaming fire in their land.
- Bible in Basic English (BBE)
- He gave them ice for rain, and flaming fire in their land.
- Darby Translation (DBY)
- He gave them hail for rain, [and] flaming fire in their land;
- Webster's Bible (WBS)
- He gave them hail for rain, [and] flaming fire in their land.
- Young's Literal Translation (YLT)
- He hath made their showers hail, A flaming fire [is] in their land.
Read in context
- 30ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
- 31ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
- 32ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.
- 33ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.
- 34ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
Cross references
- Psalm 78:47–48 ಕೀರ್ತನೆಗಳು 78:47–48ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Exodus 9:18–28 ವಿಮೋಚನಕಾಂಡ 9:18–28ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ. ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು. ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು. ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು. ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು. ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು. ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ. ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ. ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
- Revelation 16:21 ಪ್ರಕಟನೆ 16:21ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Revelation 8:7 ಪ್ರಕಟನೆ 8:7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.