Psalms · chapter 105 · verse 40
Psalm 105:40 in Kannada
ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
Avaru kelidaaga laavakkigalannu baramaadi, paralokada rottiyinda avarannu truptipadisidanu.
Psalm 105:40 in English
- King James Version (KJV)
- [The people] asked, and he brought quails, and satisfied them with the bread of heaven.
- World English Bible (WEB)
- They asked, and he brought quails, and satisfied them with the bread of the sky.
- American Standard Version (ASV)
- They asked, and he brought quails, And satisfied them with the bread of heaven.
- Bible in Basic English (BBE)
- At the people's request he sent birds, and gave them the bread of heaven for food.
- Darby Translation (DBY)
- They asked, and he brought quails, and satisfied them with the bread of heaven.
- Webster's Bible (WBS)
- [The people] asked, and he brought quails, and satisfied them with the bread of heaven.
- Young's Literal Translation (YLT)
- They have asked, and He bringeth quails, And [with] bread of heaven satisfieth them.
Read in context
- 38ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
- 39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
- 40ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
- 41ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
- 42ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
Cross references
- Psalm 78:18 ಕೀರ್ತನೆಗಳು 78:18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
- Joshua 5:12 ಯೆಹೋಶುವ 5:12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- Numbers 11:31–33 ಅರಣ್ಯಕಾಂಡ 11:31–33ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು. ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
- John 6:31–33 ಯೋಹಾನನು 6:31–33ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು. ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ. ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- Psalm 78:23–28 ಕೀರ್ತನೆಗಳು 78:23–28ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು. ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು. ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
- John 6:48–58 ಯೋಹಾನನು 6:48–58ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- Deuteronomy 8:3 ಧರ್ಮೋಪದೇಶಕಾಂಡ 8:3ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
- Nehemiah 9:20 ನೆಹೆಮೀಯ 9:20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- Numbers 11:4–9 ಅರಣ್ಯಕಾಂಡ 11:4–9ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು? ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ. ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು. ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು. ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು. ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
- Exodus 16:12–35 ವಿಮೋಚನಕಾಂಡ 16:12–35ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು. ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು. ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು. ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು. ಇಸ್ರಾಯೇಲ್ ಮಕ್ಕಳು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು. ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು. ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು. ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು. ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನು ವಷ್ಟು ಪ್ರತಿ ದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು. ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು. ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು. ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ. ಆಗ ಮೋಶೆಯು--ಈ ಹೊತ್ತು ಅದನ್ನು ಊಟಮಾಡಿರಿ, ಯಾಕಂದರೆ ಈ ದಿನವು ಕರ್ತನ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ (ಆಹಾರ) ಸಿಕ್ಕುವದಿಲ್ಲ. ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು. ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ. ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು. ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು. ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಆಗ ಇಸ್ರಾಯೇಲ್ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು. ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು. ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು. ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.