Psalms · chapter 105 · verse 45
Psalm 105:45 in Kannada
ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
Aatana niyamagalannu kaikondu nyaayapramaana galannoo kaapaaduvadakkaagi aatanu anyajanaangada deshagalannu avarige kottanu. Kartanannu stutisiri.
Psalm 105:45 in English
- King James Version (KJV)
- That they might observe his statutes, and keep his laws. Praise ye the LORD.
- World English Bible (WEB)
- that they might keep his statutes, and observe his laws. Praise the LORD!
- American Standard Version (ASV)
- That they might keep his statutes, And observe his laws. Praise ye Jehovah.
- Bible in Basic English (BBE)
- So that they might keep his orders, and be true to his laws. Give praise to the Lord.
- Darby Translation (DBY)
- That they might keep his statutes, and observe his laws. Hallelujah!
- Webster's Bible (WBS)
- That they might observe his statutes, and keep his laws. Praise ye the LORD.
- Young's Literal Translation (YLT)
- That they may observe His statutes, And His laws may keep. Praise ye Jehovah!
Read in context
- 43ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,
- 44ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- 45ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
Cross references
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Ephesians 2:8–10 ಎಫೆಸದವರಿಗೆ 2:8–10ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Deuteronomy 4:1 ಧರ್ಮೋಪದೇಶಕಾಂಡ 4:1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Revelation 19:3–4 ಪ್ರಕಟನೆ 19:3–4ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- Psalm 150:1 ಕೀರ್ತನೆಗಳು 150:1ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
- Deuteronomy 6:21–25 ಧರ್ಮೋಪದೇಶಕಾಂಡ 6:21–25ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು. ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು. ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು. ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು. ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
- Ezekiel 36:24–28 ಯೆಹೆಜ್ಕೇಲನು 36:24–28ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.