Psalms · chapter 106 · verse 15
Psalm 106:15 in Kannada
ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
Aaga avara bedikeyante avarige aatanu kottanu; aadare avara praanadalli ksheenateyannu kaluhisidanu.
Psalm 106:15 in English
- King James Version (KJV)
- And he gave them their request; but sent leanness into their soul.
- World English Bible (WEB)
- He gave them their request, but sent leanness into their soul.
- American Standard Version (ASV)
- And he gave them their request, But sent leanness into their soul.
- Bible in Basic English (BBE)
- And he gave them their request, but sent a wasting disease into their souls.
- Darby Translation (DBY)
- Then he gave them their request, but sent leanness into their soul.
- Webster's Bible (WBS)
- And he gave them their request; but sent leanness into their soul.
- Young's Literal Translation (YLT)
- And He giveth to them their request, And sendeth leanness into their soul.
Read in context
- 13ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- 14ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
- 15ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
- 16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
- 17ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.
Cross references
- Numbers 11:31–34 ಅರಣ್ಯಕಾಂಡ 11:31–34ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು. ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು. ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
- Isaiah 10:16 ಯೆಶಾಯ 10:16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
- Psalm 78:29–31 ಕೀರ್ತನೆಗಳು 78:29–31ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
- Isaiah 24:16 ಯೆಶಾಯ 24:16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.