Psalms · chapter 106 · verse 2
Psalm 106:2 in Kannada
ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
Kartana paraakrama kriyegalannu prakatisuvavanaaru? Aatana stotragalannu prasiddhi padisuvavanaaru?
Psalm 106:2 in English
- King James Version (KJV)
- Who can utter the mighty acts of the LORD? [who] can shew forth all his praise?
- World English Bible (WEB)
- Who can utter the mighty acts of the LORD, or fully declare all his praise?
- American Standard Version (ASV)
- Who can utter the mighty acts of Jehovah, Or show forth all his praise?
- Bible in Basic English (BBE)
- Who is able to give an account of the great acts of the Lord, or to make clear all his praise?
- Darby Translation (DBY)
- Who can utter the mighty acts of Jehovah? [who] can shew forth all his praise?
- Webster's Bible (WBS)
- Who can utter the mighty acts of the LORD? [who] can show forth all his praise?
- Young's Literal Translation (YLT)
- Who doth utter the mighty acts of Jehovah? Soundeth all His praise?
Read in context
- 1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- 2ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
- 3ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
- 4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
Cross references
- Ephesians 1:19 ಎಫೆಸದವರಿಗೆ 1:19ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Psalm 139:17–18 ಕೀರ್ತನೆಗಳು 139:17–18ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ. ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
- Psalm 145:3–12 ಕೀರ್ತನೆಗಳು 145:3–12ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು. ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ. ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- Nehemiah 9:5 ನೆಹೆಮೀಯ 9:5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- Job 26:14 ಯೋಬನು 26:14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- Ephesians 3:18 ಎಫೆಸದವರಿಗೆ 3:18ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- Job 5:9 ಯೋಬನು 5:9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.