Psalms · chapter 106 · verse 28
Psalm 106:28 in Kannada
ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
Baalpego yorige koodikondu sattavarige arpisida baligalannu tindu
Psalm 106:28 in English
- King James Version (KJV)
- They joined themselves also unto Baal-peor, and ate the sacrifices of the dead.
- World English Bible (WEB)
- They joined themselves also to Baal Peor, and ate the sacrifices of the dead.
- American Standard Version (ASV)
- They joined themselves also unto Baal-peor, And ate the sacrifices of the dead.
- Bible in Basic English (BBE)
- And they were joined to Baal-peor, and took part in the offerings to the dead.
- Darby Translation (DBY)
- And they joined themselves unto Baal-Peor, and ate the sacrifices of the dead;
- Webster's Bible (WBS)
- They joined themselves also to Baal-peor, and ate the sacrifices of the dead.
- Young's Literal Translation (YLT)
- And they are coupled to Baal-Peor, And eat the sacrifices of the dead,
Read in context
- 26ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
- 27ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
- 28ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
- 29ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
- 30ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
Cross references
- Numbers 25:5 ಅರಣ್ಯಕಾಂಡ 25:5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- Hosea 9:10 ಹೋಶೇಯ 9:10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
- Numbers 25:1–3 ಅರಣ್ಯಕಾಂಡ 25:1–3ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು. ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು. ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- 1 Corinthians 10:19–20 1 ಕೊರಿಂಥದವರಿಗೆ 10:19–20ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- Jeremiah 10:8–10 ಯೆರೆಮೀಯ 10:8–10ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Deuteronomy 4:3 ಧರ್ಮೋಪದೇಶಕಾಂಡ 4:3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Deuteronomy 32:17 ಧರ್ಮೋಪದೇಶಕಾಂಡ 32:17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Joshua 22:17 ಯೆಹೋಶುವ 22:17ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.
- Numbers 31:16 ಅರಣ್ಯಕಾಂಡ 31:16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.