Psalms · chapter 106 · verse 32
Psalm 106:32 in Kannada
ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
Avaru vivaadada neerina baliyalli aatanige kopavannebbisidaru; avara nimitta moshege kedu bantu.
Psalm 106:32 in English
- King James Version (KJV)
- They angered [him] also at the waters of strife, so that it went ill with Moses for their sakes:
- World English Bible (WEB)
- They angered him also at the waters of Meribah, so that Moses was troubled for their sakes;
- American Standard Version (ASV)
- They angered him also at the waters of Meribah, So that it went ill with Moses for their sakes;
- Bible in Basic English (BBE)
- They made God angry again at the waters of Meribah, so that Moses was troubled because of them;
- Darby Translation (DBY)
- And they moved him to wrath at the waters of Meribah, and it went ill with Moses on their account;
- Webster's Bible (WBS)
- They angered [him] also at the waters of strife, so that it went ill with Moses for their sakes:
- Young's Literal Translation (YLT)
- And they cause wrath by the waters of Meribah, And it is evil to Moses for their sakes,
Read in context
- 30ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
- 31ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
- 32ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
- 33ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- 34ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
Cross references
- Numbers 20:2–13 ಅರಣ್ಯಕಾಂಡ 20:2–13ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು. ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು. ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು. ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು. ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು. ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು. ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು. ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು. ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು. ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
- Numbers 20:23–24 ಅರಣ್ಯಕಾಂಡ 20:23–24ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ-- ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
- Psalm 81:7 ಕೀರ್ತನೆಗಳು 81:7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- Deuteronomy 1:37 ಧರ್ಮೋಪದೇಶಕಾಂಡ 1:37ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
- Deuteronomy 4:21 ಧರ್ಮೋಪದೇಶಕಾಂಡ 4:21ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
- Deuteronomy 3:26 ಧರ್ಮೋಪದೇಶಕಾಂಡ 3:26ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
- Numbers 27:13–14 ಅರಣ್ಯಕಾಂಡ 27:13–14ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ. ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
- Psalm 78:40 ಕೀರ್ತನೆಗಳು 78:40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.