Psalms · chapter 106 · verse 34
Psalm 106:34 in Kannada
ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
Kartanu avarige helida janagalannu avaru naashamaadade hodaru.
Psalm 106:34 in English
- King James Version (KJV)
- They did not destroy the nations, concerning whom the LORD commanded them:
- World English Bible (WEB)
- They didn’t destroy the peoples, as the LORD commanded them,
- American Standard Version (ASV)
- They did not destroy the peoples, As Jehovah commanded them,
- Bible in Basic English (BBE)
- They did not put an end to the peoples, as the Lord had said;
- Darby Translation (DBY)
- They did not destroy the peoples, as Jehovah commanded them;
- Webster's Bible (WBS)
- They did not destroy the nations, concerning whom the LORD commanded them:
- Young's Literal Translation (YLT)
- They have not destroyed the peoples, As Jehovah had said to them,
Read in context
- 32ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
- 33ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- 34ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
- 35ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
- 36ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
Cross references
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- Joshua 23:12–13 ಯೆಹೋಶುವ 23:12–13ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- Matthew 17:19–20 ಮತ್ತಾಯನು 17:19–20ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು. ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- 1 Samuel 15:22–23 1 ಸಮುವೇಲನು 15:22–23ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು. ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- Numbers 33:55–56 ಅರಣ್ಯಕಾಂಡ 33:55–56ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು. ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
- Deuteronomy 20:16–17 ಧರ್ಮೋಪದೇಶಕಾಂಡ 20:16–17ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು. ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Judges 1:27–36 ನ್ಯಾಯಸ್ಥಾಪಕರು 1:27–36ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು. ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು. ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು. ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು. ನಫ್ತಾಲ್ಯರು ಬೇತ್ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು. ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು. ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
- Deuteronomy 7:23–24 ಧರ್ಮೋಪದೇಶಕಾಂಡ 7:23–24ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು. ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
- Judges 1:19 ನ್ಯಾಯಸ್ಥಾಪಕರು 1:19ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.