Psalms · chapter 106 · verse 37
Psalm 106:37 in Kannada
ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
Tamma gandu hennu makkalannoo devvagalige arpisidaru.
Psalm 106:37 in English
- King James Version (KJV)
- Yea, they sacrificed their sons and their daughters unto devils,
- World English Bible (WEB)
- Yes, they sacrificed their sons and their daughters to demons.
- American Standard Version (ASV)
- Yea, they sacrificed their sons and their daughters unto demons,
- Bible in Basic English (BBE)
- They even made offerings of their sons and their daughters to evil spirits,
- Darby Translation (DBY)
- And they sacrificed their sons and their daughters unto demons,
- Webster's Bible (WBS)
- Yes, they sacrificed their sons and their daughters to demons,
- Young's Literal Translation (YLT)
- And they sacrifice their sons And their daughters to destroyers,
Read in context
- 35ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
- 36ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
- 37ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
- 38ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- 39ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
Cross references
- 2 Kings 17:17 2 ಅರಸುಗಳು 17:17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
- 2 Kings 16:3 2 ಅರಸುಗಳು 16:3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
- Jeremiah 7:31 ಯೆರೆಮೀಯ 7:31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
- Deuteronomy 32:17 ಧರ್ಮೋಪದೇಶಕಾಂಡ 32:17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Deuteronomy 12:30–31 ಧರ್ಮೋಪದೇಶಕಾಂಡ 12:30–31ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Ezekiel 23:37 ಯೆಹೆಜ್ಕೇಲನು 23:37ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
- Ezekiel 16:20–21 ಯೆಹೆಜ್ಕೇಲನು 16:20–21ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
- Ezekiel 20:26 ಯೆಹೆಜ್ಕೇಲನು 20:26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
- 1 Corinthians 10:20 1 ಕೊರಿಂಥದವರಿಗೆ 10:20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- 2 Kings 21:6 2 ಅರಸುಗಳು 21:6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
- Deuteronomy 18:10 ಧರ್ಮೋಪದೇಶಕಾಂಡ 18:10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
- Isaiah 57:5 ಯೆಶಾಯ 57:5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?