Psalms · chapter 106 · verse 40
Psalm 106:40 in Kannada
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
Aaga kartana kopavu aatana janarige virodhavaagi uri yitu; aatanu tanna svanta baadhyateyannu asahyisi kondu
Psalm 106:40 in English
- King James Version (KJV)
- Therefore was the wrath of the LORD kindled against his people, insomuch that he abhorred his own inheritance.
- World English Bible (WEB)
- Therefore the LORD burned with anger against his people. He abhorred his inheritance.
- American Standard Version (ASV)
- Therefore was the wrath of Jehovah kindled against his people, And he abhorred his inheritance.
- Bible in Basic English (BBE)
- Then the wrath of the Lord was burning against his people, and he was angry with his heritage.
- Darby Translation (DBY)
- Then was the anger of Jehovah kindled against his people, and he abhorred his inheritance;
- Webster's Bible (WBS)
- Therefore was the wrath of the LORD kindled against his people, insomuch that he abhorred his own inheritance.
- Young's Literal Translation (YLT)
- And the anger of Jehovah Is kindled against His people, And He doth abominate His inheritance.
Read in context
- 38ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- 39ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- 40ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
- 41ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
- 42ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
Cross references
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- Deuteronomy 9:29 ಧರ್ಮೋಪದೇಶಕಾಂಡ 9:29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Judges 2:20 ನ್ಯಾಯಸ್ಥಾಪಕರು 2:20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
- Judges 3:8 ನ್ಯಾಯಸ್ಥಾಪಕರು 3:8ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
- Deuteronomy 32:19 ಧರ್ಮೋಪದೇಶಕಾಂಡ 32:19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- Leviticus 20:23 ಯಾಜಕಕಾಂಡ 20:23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
- Nehemiah 9:27–38 ನೆಹೆಮೀಯ 9:27–38ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ. ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ. ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು. ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ. ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ. ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ. ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು. ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು. ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ. ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ. ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು. ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Psalm 78:59–62 ಕೀರ್ತನೆಗಳು 78:59–62ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು, ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.