Psalms · chapter 106 · verse 44
Psalm 106:44 in Kannada
ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
Aadaagyoo avara koogannu aatanu kelidaaga avara ikkattina mele lakshyavittu
Psalm 106:44 in English
- King James Version (KJV)
- Nevertheless he regarded their affliction, when he heard their cry:
- World English Bible (WEB)
- Nevertheless he regarded their distress, when he heard their cry.
- American Standard Version (ASV)
- Nevertheless he regarded their distress, When he heard their cry:
- Bible in Basic English (BBE)
- But when their cry came to his ears, he had pity on their trouble:
- Darby Translation (DBY)
- But he regarded their distress, when he heard their cry;
- Webster's Bible (WBS)
- Nevertheless he regarded their affliction, when he heard their cry:
- Young's Literal Translation (YLT)
- And He looketh on their distress When He heareth their cry,
Read in context
- 42ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
- 43ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
- 44ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
- 45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- 46ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
Cross references
- Judges 3:9 ನ್ಯಾಯಸ್ಥಾಪಕರು 3:9ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
- Judges 4:3 ನ್ಯಾಯಸ್ಥಾಪಕರು 4:3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- 2 Kings 14:26–27 2 ಅರಸುಗಳು 14:26–27ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ. ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
- Judges 6:6–10 ನ್ಯಾಯಸ್ಥಾಪಕರು 6:6–10ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು. ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು. ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು. ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- Nehemiah 9:27–38 ನೆಹೆಮೀಯ 9:27–38ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ. ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ. ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು. ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ. ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ. ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ. ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು. ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು. ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ. ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ. ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು. ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- 1 Samuel 7:8–12 1 ಸಮುವೇಲನು 7:8–12ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು. ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು. ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು. ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು. ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- Judges 10:10–16 ನ್ಯಾಯಸ್ಥಾಪಕರು 10:10–16ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು. ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ? ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು. ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ. ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು. ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.