Psalms · chapter 106 · verse 47
Psalm 106:47 in Kannada
ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
O namma devaraada kartane, naavu ninna parishuddha hesarige upakaarastuti maadi ninna stotradalli jayaghosha maaduva haage nammannu rakshisu. Anyajanaangagalolaginda nammannu horage baramaadu.israayelina devaraada kartanige yugayugaantarakkoo stutiyuntaagali. Janarellaa aamen endu helali. Neevu kartanannu stutisiri.
Psalm 106:47 in English
- King James Version (KJV)
- Save us, O LORD our God, and gather us from among the heathen, to give thanks unto thy holy name, [and] to triumph in thy praise.
- World English Bible (WEB)
- Save us, LORD, our God, gather us from among the nations, to give thanks to your holy name, to triumph in your praise!
- American Standard Version (ASV)
- Save us, O Jehovah our God, And gather us from among the nations, To give thanks unto thy holy name, And to triumph in thy praise.
- Bible in Basic English (BBE)
- Be our saviour, O Lord our God, and let us come back together from among the nations, so that we may give honour to your holy name, and have glory in your praise.
- Darby Translation (DBY)
- Save us, Jehovah our God, and gather us from among the nations, to give thanks unto thy holy name, [and] to triumph in thy praise.
- Webster's Bible (WBS)
- Save us, O LORD our God, and gather us from among the heathen, to give thanks to thy holy name, [and] to triumph in thy praise.
- Young's Literal Translation (YLT)
- Save us, O Jehovah our God, and gather us from the nations, To give thanks to Thy holy name, To glory in Thy praise.
Read in context
- 45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- 46ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
- 47ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- 48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
Cross references
- 1 Chronicles 16:35–36 1 ಪೂರ್ವಕಾಲವೃತ್ತಾಂತ 16:35–36ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು. ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
- Revelation 7:10–12 ಪ್ರಕಟನೆ 7:10–12ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- Psalm 14:7 ಕೀರ್ತನೆಗಳು 14:7ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- Ezekiel 36:24–28 ಯೆಹೆಜ್ಕೇಲನು 36:24–28ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
- Psalm 107:1–3 ಕೀರ್ತನೆಗಳು 107:1–3ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು. ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.
- Psalm 126:1 ಕೀರ್ತನೆಗಳು 126:1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- Ezekiel 39:25–29 ಯೆಹೆಜ್ಕೇಲನು 39:25–29ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು. ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ, ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು; ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Psalm 147:2 ಕೀರ್ತನೆಗಳು 147:2ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
- Jeremiah 32:37–41 ಯೆರೆಮೀಯ 32:37–41ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು. ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Ezekiel 37:21–28 ಯೆಹೆಜ್ಕೇಲನು 37:21–28ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು. ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು. ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.