Psalms · chapter 107 · verse 17
Psalm 107:17 in Kannada
ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
Moodharu tamma drohadindaloo akramagalindaloo shramepaduttaare.
Psalm 107:17 in English
- King James Version (KJV)
- Fools because of their transgression, and because of their iniquities, are afflicted.
- World English Bible (WEB)
- Fools are afflicted because of their disobedience, and because of their iniquities.
- American Standard Version (ASV)
- Fools because of their transgression, And because of their iniquities, are afflicted.
- Bible in Basic English (BBE)
- Foolish men, because of their sins, and because of their wrongdoing, are troubled;
- Darby Translation (DBY)
- Fools, because of their way of transgression, and because of their iniquities, are afflicted;
- Webster's Bible (WBS)
- Fools, because of their transgression, and because of their iniquities, are afflicted.
- Young's Literal Translation (YLT)
- Fools, by means of their transgression, And by their iniquities, afflict themselves.
Read in context
- 15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- 16ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
- 17ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
- 18ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
- 19ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
Cross references
- Lamentations 3:39 ಪ್ರಲಾಪಗಳು 3:39ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Proverbs 7:7 ಜ್ಞಾನೋಕ್ತಿಗಳು 7:7ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
- Psalm 92:6 ಕೀರ್ತನೆಗಳು 92:6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Psalm 38:1–8 ಕೀರ್ತನೆಗಳು 38:1–8ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ. ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ. ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- Isaiah 65:6–7 ಯೆಶಾಯ 65:6–7ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ. ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
- Isaiah 57:17–18 ಯೆಶಾಯ 57:17–18ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ. ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- Numbers 11:33–34 ಅರಣ್ಯಕಾಂಡ 11:33–34ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು. ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
- Numbers 21:5–9 ಅರಣ್ಯಕಾಂಡ 21:5–9ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು. ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು. ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು. ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು. ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Psalm 14:1 ಕೀರ್ತನೆಗಳು 14:1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
- Numbers 12:10–13 ಅರಣ್ಯಕಾಂಡ 12:10–13ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು. ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ. ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.