Psalms · chapter 107 · verse 2
Psalm 107:2 in Kannada
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
Kartanu vimochisi davaru haageye helali; aatanu vairiya kaiyinda bidugade maadi,
Psalm 107:2 in English
- King James Version (KJV)
- Let the redeemed of the LORD say [so], whom he hath redeemed from the hand of the enemy;
- World English Bible (WEB)
- Let the redeemed by the LORD say so, whom he has redeemed from the hand of the adversary,
- American Standard Version (ASV)
- Let the redeemed of Jehovah say [so], Whom he hath redeemed from the hand of the adversary,
- Bible in Basic English (BBE)
- Let those whose cause the Lord has taken up say so, his people whom he has taken out of the hands of their haters;
- Darby Translation (DBY)
- Let the redeemed of Jehovah say so, whom he hath redeemed from the hand of the oppressor,
- Webster's Bible (WBS)
- Let the redeemed of the LORD say [so] , whom he hath redeemed from the hand of the enemy;
- Young's Literal Translation (YLT)
- Let the redeemed of Jehovah say, Whom He redeemed from the hand of an adversary.
Read in context
- 1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- 2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- 3ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.
- 4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
Cross references
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Luke 1:74 ಲೂಕನು 1:74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Psalm 31:5 ಕೀರ್ತನೆಗಳು 31:5ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
- Psalm 106:10 ಕೀರ್ತನೆಗಳು 106:10ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- Isaiah 35:9 ಯೆಶಾಯ 35:9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Deuteronomy 7:8 ಧರ್ಮೋಪದೇಶಕಾಂಡ 7:8ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- Jeremiah 15:21 ಯೆರೆಮೀಯ 15:21ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.