Psalms · chapter 107 · verse 34
Psalm 107:34 in Kannada
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
Phala vulla bhoomiyannu banjaraagiyoo adara nivaasi gala kettatanakkoskara maarpadisuttaane.
Psalm 107:34 in English
- King James Version (KJV)
- A fruitful land into barrenness, for the wickedness of them that dwell therein.
- World English Bible (WEB)
- and a fruitful land into a salt waste, for the wickedness of those who dwell in it.
- American Standard Version (ASV)
- A fruitful land into a salt desert, For the wickedness of them that dwell therein.
- Bible in Basic English (BBE)
- He makes a fertile country into a salt waste, because of the sins of those who are living there.
- Darby Translation (DBY)
- A fruitful land into a plain of salt, for the wickedness of them that dwell therein.
- Webster's Bible (WBS)
- A fruitful land into barrenness, for the wickedness of them that dwell in it.
- Young's Literal Translation (YLT)
- A fruitful land becometh a barren place, For the wickedness of its inhabitants.
Read in context
- 32ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
- 33ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ
- 34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- 35ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
- 36ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,
Cross references
- Genesis 14:3 ಆದಿಕಾಂಡ 14:3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Ezekiel 47:11 ಯೆಹೆಜ್ಕೇಲನು 47:11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
- Deuteronomy 29:23–28 ಧರ್ಮೋಪದೇಶಕಾಂಡ 29:23–28ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Genesis 19:24–25 ಆದಿಕಾಂಡ 19:24–25ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- Isaiah 32:13–15 ಯೆಶಾಯ 32:13–15ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು. ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು. ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.