Psalms · chapter 107 · verse 35
Psalm 107:35 in Kannada
ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
Aatanu aranyavannu neerina kereyaagiyoo ona bhoomi yannu neerina buggegalaagiyoo maarpadisuttaane.
Psalm 107:35 in English
- King James Version (KJV)
- He turneth the wilderness into a standing water, and dry ground into watersprings.
- World English Bible (WEB)
- He turns a desert into a pool of water, and a dry land into water springs.
- American Standard Version (ASV)
- He turneth a wilderness into a pool of water, And a dry land into watersprings.
- Bible in Basic English (BBE)
- He makes a waste land into a place of water, and a dry land into water-springs.
- Darby Translation (DBY)
- He maketh the wilderness into a pool of water, and the dry land into water-springs;
- Webster's Bible (WBS)
- He turneth the wilderness into a standing water, and dry ground into water-springs.
- Young's Literal Translation (YLT)
- He maketh a wilderness become a pool of water, And a dry land become fountains of waters.
Read in context
- 33ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ
- 34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- 35ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
- 36ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,
- 37ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
Cross references
- Psalm 114:8 ಕೀರ್ತನೆಗಳು 114:8ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Isaiah 35:6–7 ಯೆಶಾಯ 35:6–7ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- Isaiah 41:17–19 ಯೆಶಾಯ 41:17–19ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು. ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
- Isaiah 44:3–5 ಯೆಶಾಯ 44:3–5ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು. ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು. ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- 2 Kings 3:16–20 2 ಅರಸುಗಳು 3:16–20ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು. ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು. ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು. ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
- Ezekiel 47:6–12 ಯೆಹೆಜ್ಕೇಲನು 47:6–12ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು. ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು. ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು. ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು, ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು. ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- Numbers 21:16–18 ಅರಣ್ಯಕಾಂಡ 21:16–18ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ. ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ. ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ