Psalms · chapter 107 · verse 39
Psalm 107:39 in Kannada
ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
Tirigi avaru kadimeyaagi kedu chintegala sankatadinda kugguttaare.
Psalm 107:39 in English
- King James Version (KJV)
- Again, they are minished and brought low through oppression, affliction, and sorrow.
- World English Bible (WEB)
- Again, they are diminished and bowed down through oppression, trouble, and sorrow.
- American Standard Version (ASV)
- Again, they are diminished and bowed down Through oppression, trouble, and sorrow.
- Bible in Basic English (BBE)
- And when they are made low, and crushed by trouble and sorrow,
- Darby Translation (DBY)
- And they are diminished and brought low, through oppression, adversity, and sorrow:
- Webster's Bible (WBS)
- Again, they are diminished and brought low through oppression, affliction, and sorrow.
- Young's Literal Translation (YLT)
- And they are diminished, and bow down, By restraint, evil, and sorrow.
Read in context
- 37ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
- 38ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
- 39ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
- 40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
- 41ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
Cross references
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- 2 Kings 10:32 2 ಅರಸುಗಳು 10:32ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
- 2 Kings 14:26 2 ಅರಸುಗಳು 14:26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
- 2 Chronicles 15:5–6 2 ಪೂರ್ವಕಾಲವೃತ್ತಾಂತ 15:5–6ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು. ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
- Judges 6:3–6 ನ್ಯಾಯಸ್ಥಾಪಕರು 6:3–6ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ. ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು. ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
- Ruth 1:20–21 ರೂತಳು 1:20–21ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು. ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
- 2 Kings 13:22 2 ಅರಸುಗಳು 13:22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
- Psalm 30:6–7 ಕೀರ್ತನೆಗಳು 30:6–7ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು. ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
- 2 Kings 4:8 2 ಅರಸುಗಳು 4:8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
- Job 1:10–17 ಯೋಬನು 1:10–17ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು. ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು. ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- 2 Kings 13:7 2 ಅರಸುಗಳು 13:7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
- 2 Kings 8:3 2 ಅರಸುಗಳು 8:3ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.