Psalms · chapter 107 · verse 6
Psalm 107:6 in Kannada
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
Aaga avaru ikkattinalli kartanige koogidaru; aatanu avara sankatagalolaginda avarannu bidisi,
Psalm 107:6 in English
- King James Version (KJV)
- Then they cried unto the LORD in their trouble, [and] he delivered them out of their distresses.
- World English Bible (WEB)
- Then they cried to the LORD in their trouble, and he delivered them out of their distresses.
- American Standard Version (ASV)
- Then they cried unto Jehovah in their trouble, And he delivered them out of their distresses,
- Bible in Basic English (BBE)
- Then they sent up their cry to the Lord in their sorrow, and he gave them salvation out of all their troubles;
- Darby Translation (DBY)
- Then they cried unto Jehovah in their trouble, [and] he delivered them out of their distresses,
- Webster's Bible (WBS)
- Then they cried to the LORD in their trouble, [and] he delivered them out of their distresses.
- Young's Literal Translation (YLT)
- And they cry unto Jehovah in their adversity, From their distress He delivereth them,
Read in context
- 4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
- 5ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.
- 6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- 7ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
- 8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
Cross references
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Jeremiah 29:12–14 ಯೆರೆಮೀಯ 29:12–14ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Hebrews 4:15–16 ಇಬ್ರಿಯರಿಗೆ 4:15–16ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ. ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Psalm 107:19 ಕೀರ್ತನೆಗಳು 107:19ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
- Psalm 107:13 ಕೀರ್ತನೆಗಳು 107:13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- Psalm 107:28 ಕೀರ್ತನೆಗಳು 107:28ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- 2 Timothy 3:11 2 ತಿಮೊಥೆಯನಿಗೆ 3:11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- 2 Corinthians 12:8–10 2 ಕೊರಿಂಥದವರಿಗೆ 12:8–10ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Isaiah 41:17–18 ಯೆಶಾಯ 41:17–18ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.