Psalms · chapter 108 · verse 10
Psalm 108:10 in Kannada
ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
Bala vulla pattanakke nannannu karetaruvavanaaru? Edomina varege nannannu nadisuvavanaaru?
Psalm 108:10 in English
- King James Version (KJV)
- Who will bring me into the strong city? who will lead me into Edom?
- World English Bible (WEB)
- Who will bring me into the fortified city? Who will lead me to Edom?
- American Standard Version (ASV)
- Who will bring me into the fortified city? Who hath led me unto Edom?
- Bible in Basic English (BBE)
- Who will take me into the strong town? who will be my guide into Edom?
- Darby Translation (DBY)
- Who will bring me into the strong city? who will lead me unto Edom?
- Webster's Bible (WBS)
- Who will bring me into the strong city: who will lead me into Edom?
- Young's Literal Translation (YLT)
- Who doth bring me in to the fenced city? Who hath led me unto Edom?
Read in context
- 8ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ
- 9ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.
- 10ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
- 11ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
- 12ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
Cross references
- Isaiah 63:1–6 ಯೆಶಾಯ 63:1–6ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು. ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- Psalm 20:6–8 ಕೀರ್ತನೆಗಳು 20:6–8ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು. ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ. ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Obadiah 1:3–4 ಓಬದ್ಯ 1:3–4ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Jeremiah 49:7–16 ಯೆರೆಮೀಯ 49:7–16ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ? ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ. ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ? ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು. ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ. ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ. ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ. ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.