Psalms · chapter 108 · verse 12
Psalm 108:12 in Kannada
ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
Ikkatti nalliruva namage sahaayakodu; manushyana sahaayavu vyarthavaagide.devarinda paraa krama kaaryagalannu maaduvevu; aatane namma vairigalannu tulidubiduvanu.
Psalm 108:12 in English
- King James Version (KJV)
- Give us help from trouble: for vain [is] the help of man.
- World English Bible (WEB)
- Give us help against the enemy, for the help of man is vain.
- American Standard Version (ASV)
- Give us help against the adversary; For vain is the help of man.
- Bible in Basic English (BBE)
- Give us help in our trouble; for there is no help in man.
- Darby Translation (DBY)
- Give us help from trouble; for vain is man's deliverance.
- Webster's Bible (WBS)
- Give us help from trouble: for vain [is] the help of man.
- Young's Literal Translation (YLT)
- Give to us help from adversity, And vain is the salvation of man.
Read in context
- 10ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
- 11ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
- 12ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- 13ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
Cross references
- Jeremiah 17:5–8 ಯೆರೆಮೀಯ 17:5–8ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 146:3–5 ಕೀರ್ತನೆಗಳು 146:3–5ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ. ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- Isaiah 31:3 ಯೆಶಾಯ 31:3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Lamentations 4:17 ಪ್ರಲಾಪಗಳು 4:17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Isaiah 30:3–5 ಯೆಶಾಯ 30:3–5ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
- Psalm 20:1–9 ಕೀರ್ತನೆಗಳು 20:1–9ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ. ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ. ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ. ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ. ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ. ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು. ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ. ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ. ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Job 16:2 ಯೋಬನು 16:2ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
- Job 9:13 ಯೋಬನು 9:13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.