Psalms · chapter 108 · verse 6
Psalm 108:6 in Kannada
ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು.
Ninna priyaru bidugadeyaaguva haage ninna balagaiyinda rakshisi nanage uttara kodu.
Psalm 108:6 in English
- King James Version (KJV)
- That thy beloved may be delivered: save [with] thy right hand, and answer me.
- World English Bible (WEB)
- That your beloved may be delivered, save with your right hand, and answer us.
- American Standard Version (ASV)
- That thy beloved may be delivered, Save with thy right hand, and answer us.
- Bible in Basic English (BBE)
- Let your right hand be stretched out for salvation, and give me an answer, so that your loved ones may be safe from danger.
- Darby Translation (DBY)
- That thy beloved ones may be delivered: save with thy right hand, and answer me.
- Webster's Bible (WBS)
- That thy beloved may be delivered: save [with] thy right hand, and answer me.
- Young's Literal Translation (YLT)
- That Thy beloved ones may be delivered, Save [with] Thy right hand, and answer us.
Read in context
- 4ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು.
- 5ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
- 6ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು.
- 7ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
- 8ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ
Cross references
- 2 Chronicles 32:20–22 2 ಪೂರ್ವಕಾಲವೃತ್ತಾಂತ 32:20–22ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು. ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು. ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
- Psalm 60:5–12 ಕೀರ್ತನೆಗಳು 60:5–12ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು. ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು. ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು; ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು. ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು? ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ? ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು. ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- Deuteronomy 33:12 ಧರ್ಮೋಪದೇಶಕಾಂಡ 33:12ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
- Ephesians 1:6 ಎಫೆಸದವರಿಗೆ 1:6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Psalm 35:1–3 ಕೀರ್ತನೆಗಳು 35:1–3ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು. ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ. ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
- Psalm 54:1 ಕೀರ್ತನೆಗಳು 54:1ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- 1 Kings 18:24 1 ಅರಸುಗಳು 18:24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Isaiah 51:2–11 ಯೆಶಾಯ 51:2–11ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು. ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು. ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು. ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ. ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು. ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ. ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು. ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ? ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.