Psalms · chapter 108 · verse 9
Psalm 108:9 in Kannada
ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.
Movaab nannannu toleyuva paatreyu; edomina mele nanna keravannu eseyuvenu; philishtiyada mele jayadhvanigaiyuvenu.
Psalm 108:9 in English
- King James Version (KJV)
- Moab [is] my washpot; over Edom will I cast out my shoe; over Philistia will I triumph.
- World English Bible (WEB)
- Moab is my wash pot. I will toss my sandal on Edom. I will shout over Philistia.”
- American Standard Version (ASV)
- Moab is my washpot; Upon Edom will I cast my shoe; Over Philistia will I shout.
- Bible in Basic English (BBE)
- Moab is my washpot; on Edom is the resting-place of my shoe; over Philistia will I send out a glad cry.
- Darby Translation (DBY)
- Moab is my wash-pot; upon Edom will I cast my sandal; over Philistia will I shout aloud.
- Webster's Bible (WBS)
- Moab [is] my washpot; over Edom will I cast out my shoe; over Philistia will I triumph.
- Young's Literal Translation (YLT)
- Moab [is] a pot for my washing, Upon Edom I cast my shoe, Over Philistia I shout habitually.
Read in context
- 7ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
- 8ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ
- 9ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.
- 10ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
- 11ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
Cross references
- John 13:14 ಯೋಹಾನನು 13:14ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
- Isaiah 14:29–32 ಯೆಶಾಯ 14:29–32ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ. ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು. ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ. ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Ruth 4:7–8 ರೂತಳು 4:7–8ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು. ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.
- John 13:8 ಯೋಹಾನನು 13:8ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
- Psalm 60:8–10 ಕೀರ್ತನೆಗಳು 60:8–10ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು. ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು? ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
- 2 Samuel 21:15–22 2 ಸಮುವೇಲನು 21:15–22ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು. ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು. ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು. ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು. ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು. ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು. ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು. ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
- 2 Samuel 8:1–2 2 ಸಮುವೇಲನು 8:1–2ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು. ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.