Psalms · chapter 109 · verse 12
Psalm 109:12 in Kannada
ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
Avanige karune torisuvavanu yaavanoo illade irali; illave dikkillada avana makkalannu karunisuvavanu yaavanoo illade irali.
Psalm 109:12 in English
- King James Version (KJV)
- Let there be none to extend mercy unto him: neither let there be any to favour his fatherless children.
- World English Bible (WEB)
- Let there be no one to extend kindness to him, neither let there be anyone to have pity on his fatherless children.
- American Standard Version (ASV)
- Let there be none to extend kindness unto him; Neither let there be any to have pity on his fatherless children.
- Bible in Basic English (BBE)
- Let no man have pity on him, or give help to his children when he is dead.
- Darby Translation (DBY)
- Let there be none to extend kindness unto him, neither let there be any to favour his fatherless children;
- Webster's Bible (WBS)
- Let there be none to extend mercy to him: neither let there be any to favor his fatherless children.
- Young's Literal Translation (YLT)
- He hath none to extend kindness, Nor is there one showing favour to his orphans.
Read in context
- 10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- 11ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
- 12ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
- 13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- 14ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
Cross references
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Psalm 137:8–9 ಕೀರ್ತನೆಗಳು 137:8–9ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು. ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- Job 5:4 ಯೋಬನು 5:4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
- Isaiah 9:17 ಯೆಶಾಯ 9:17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Luke 11:50–51 ಲೂಕನು 11:50–51ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Isaiah 13:18 ಯೆಶಾಯ 13:18ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.