Psalms · chapter 111 · verse 1
Psalm 111:1 in Kannada
ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
Kartanannu stutisiri; naanu kartanannu poornahrudayadinda yathaarthara kootadalliyoo sabheyalliyoo kondaaduvenu.
Psalm 111:1 in English
- King James Version (KJV)
- Praise ye the LORD. I will praise the LORD with [my] whole heart, in the assembly of the upright, and [in] the congregation.
- World English Bible (WEB)
- Praise the LORD! I will give thanks to the LORD with my whole heart, in the council of the upright, and in the congregation.
- American Standard Version (ASV)
- Praise ye Jehovah. I will give thanks unto Jehovah with my whole heart, In the council of the upright, and in the congregation.
- Bible in Basic English (BBE)
- Let the Lord be praised. I will give praise to the Lord with all my heart, among the upright, and in the meeting of the people.
- Darby Translation (DBY)
- Hallelujah! I will celebrate Jehovah with [my] whole heart, in the council of the upright, and in the assembly.
- Webster's Bible (WBS)
- Praise ye the LORD. I will praise the LORD with [my] whole heart, in the assembly of the upright, and [in] the congregation.
- Young's Literal Translation (YLT)
- Praise ye Jah! I thank Jehovah with the whole heart, In the secret meeting of the upright, And of the company.
Read in context
- 1ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
- 2ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
- 3ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
Cross references
- Psalm 138:1 ಕೀರ್ತನೆಗಳು 138:1ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
- Psalm 149:1 ಕೀರ್ತನೆಗಳು 149:1ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Psalm 109:30 ಕೀರ್ತನೆಗಳು 109:30ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Psalm 35:18 ಕೀರ್ತನೆಗಳು 35:18ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
- Psalm 108:3 ಕೀರ್ತನೆಗಳು 108:3ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
- Psalm 40:9–10 ಕೀರ್ತನೆಗಳು 40:9–10ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ. ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Psalm 106:48 ಕೀರ್ತನೆಗಳು 106:48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Psalm 22:25 ಕೀರ್ತನೆಗಳು 22:25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- 2 Chronicles 6:3–4 2 ಪೂರ್ವಕಾಲವೃತ್ತಾಂತ 6:3–4ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು. ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
- Psalm 89:5 ಕೀರ್ತನೆಗಳು 89:5ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
- 1 Chronicles 29:10–20 1 ಪೂರ್ವಕಾಲವೃತ್ತಾಂತ 29:10–20ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು. ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು. ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು. ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.