Psalms · chapter 111 · verse 3
Psalm 111:3 in Kannada
ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
Aatana kelasavu prabheyoo mahimeyoo ulladdu; aatana neetiyu endendigoo nilluttade.
Psalm 111:3 in English
- King James Version (KJV)
- His work [is] honourable and glorious: and his righteousness endureth for ever.
- World English Bible (WEB)
- His work is honor and majesty. His righteousness endures forever.
- American Standard Version (ASV)
- His work is honor and majesty; And his righteousness endureth for ever.
- Bible in Basic English (BBE)
- His work is full of honour and glory; and his righteousness is unchanging for ever.
- Darby Translation (DBY)
- His work is majesty and splendour, and his righteousness abideth for ever.
- Webster's Bible (WBS)
- His work [is] honorable and glorious: and his righteousness endureth for ever.
- Young's Literal Translation (YLT)
- Honourable and majestic is His work, And His righteousness is standing for ever.
Read in context
- 1ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
- 2ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
- 3ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
- 4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
- 5ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
Cross references
- Psalm 145:4–5 ಕೀರ್ತನೆಗಳು 145:4–5ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
- Psalm 145:10–12 ಕೀರ್ತನೆಗಳು 145:10–12ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- Ephesians 3:10 ಎಫೆಸದವರಿಗೆ 3:10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- Revelation 5:12–14 ಪ್ರಕಟನೆ 5:12–14ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 119:142 ಕೀರ್ತನೆಗಳು 119:142ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Ephesians 1:6–8 ಎಫೆಸದವರಿಗೆ 1:6–8ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- Isaiah 51:8 ಯೆಶಾಯ 51:8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Psalm 19:1 ಕೀರ್ತನೆಗಳು 19:1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Psalm 112:3 ಕೀರ್ತನೆಗಳು 112:3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.