Psalms · chapter 111 · verse 5
Psalm 111:5 in Kannada
ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
Aatanu tanage bhayapaduva varige aahaara kottiddaane; yugayugakkoo tanna odambadikeyannu jnyaapakamaadikolluvanu.
Psalm 111:5 in English
- King James Version (KJV)
- He hath given meat unto them that fear him: he will ever be mindful of his covenant.
- World English Bible (WEB)
- He has given food to those who fear him. He always remembers his covenant.
- American Standard Version (ASV)
- He hath given food unto them that fear him: He will ever be mindful of his covenant.
- Bible in Basic English (BBE)
- He has given food to his worshippers; he will keep his agreement in mind for ever.
- Darby Translation (DBY)
- He hath given meat unto them that fear him; he is ever mindful of his covenant.
- Webster's Bible (WBS)
- He hath given food to them that fear him: he will ever be mindful of his covenant.
- Young's Literal Translation (YLT)
- Prey He hath given to those fearing Him, He remembereth to the age His covenant.
Read in context
- 3ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
- 4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
- 5ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
- 6ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
- 7ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು.
Cross references
- Psalm 105:8 ಕೀರ್ತನೆಗಳು 105:8ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
- Luke 1:72 ಲೂಕನು 1:72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- Nehemiah 1:5 ನೆಹೆಮೀಯ 1:5ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Matthew 6:26–33 ಮತ್ತಾಯನು 6:26–33ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ? ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ? ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ. ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ. ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ? ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Psalm 89:34 ಕೀರ್ತನೆಗಳು 89:34ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- Daniel 9:4 ದಾನಿಯೇಲನು 9:4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
- Luke 12:30 ಲೂಕನು 12:30ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Psalm 34:9–10 ಕೀರ್ತನೆಗಳು 34:9–10ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.