Psalms · chapter 111 · verse 6
Psalm 111:6 in Kannada
ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
Anya janara baadhyateyannu avarige koduva haage tanna kelasagala balavannu janarige torisiddaane.
Psalm 111:6 in English
- King James Version (KJV)
- He hath shewed his people the power of his works, that he may give them the heritage of the heathen.
- World English Bible (WEB)
- He has shown his people the power of his works, in giving them the heritage of the nations.
- American Standard Version (ASV)
- He hath showed his people the power of his works, In giving them the heritage of the nations.
- Bible in Basic English (BBE)
- He has made clear to his people the power of his works, giving them the heritage of the nations.
- Darby Translation (DBY)
- He hath shewn his people the power of his works, to give them the heritage of the nations.
- Webster's Bible (WBS)
- He hath shown his people the power of his works, that he may give them the heritage of the heathen.
- Young's Literal Translation (YLT)
- The power of His works He hath declared to His people, To give to them the inheritance of nations.
Read in context
- 4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
- 5ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
- 6ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
- 7ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು.
- 8ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
Cross references
- Psalm 2:8 ಕೀರ್ತನೆಗಳು 2:8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- Psalm 80:8 ಕೀರ್ತನೆಗಳು 80:8ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
- Psalm 44:2 ಕೀರ್ತನೆಗಳು 44:2ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
- Joshua 10:13–14 ಯೆಹೋಶುವ 10:13–14ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು. ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
- Joshua 3:14–17 ಯೆಹೋಶುವ 3:14–17ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು. ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Psalm 78:12–72 ಕೀರ್ತನೆಗಳು 78:12–72ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು. ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು. ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು. ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು. ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು. ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು. ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು. ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ. ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು. ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು. ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು. ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು. ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ. ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು. ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ. ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು. ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು. ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು. ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ. ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು. ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು. ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು. ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು. ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು. ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ. ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು. ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು. ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು, ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು. ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ. ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು, ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು. ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Joshua 6:20 ಯೆಹೋಶುವ 6:20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- Psalm 105:27–45 ಕೀರ್ತನೆಗಳು 105:27–45ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು. ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು. ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು. ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು. ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು. ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು, ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ. ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Deuteronomy 4:32–38 ಧರ್ಮೋಪದೇಶಕಾಂಡ 4:32–38ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ? ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ? ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ? ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ. ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ. ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು. ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.