Psalms · chapter 112 · verse 10
Psalm 112:10 in Kannada
ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
Dushtanu nodi duhkhapaduvanu; tanna hallu galannu kadidu karagihoguvanu; dushtara aasheyu naashavaaguvadu.
Psalm 112:10 in English
- King James Version (KJV)
- The wicked shall see [it], and be grieved; he shall gnash with his teeth, and melt away: the desire of the wicked shall perish.
- World English Bible (WEB)
- The wicked will see it, and be grieved. He shall gnash with his teeth, and melt away. The desire of the wicked will perish.
- American Standard Version (ASV)
- The wicked shall see it, and be grieved; He shall gnash with his teeth, and melt away: The desire of the wicked shall perish.
- Bible in Basic English (BBE)
- The sinner will see it with grief; he will be wasted away with envy; the desire of the evil-doers will come to nothing.
- Darby Translation (DBY)
- The wicked [man] shall see [it] and be vexed; he shall gnash with his teeth, and melt away: the desire of the wicked shall perish.
- Webster's Bible (WBS)
- The wicked shall see [it] , and be grieved; he shall gnash with his teeth, and melt away: the desire of the wicked shall perish.
- Young's Literal Translation (YLT)
- The wicked seeth, and hath been angry, His teeth he gnasheth, and hath melted, The desire of the wicked doth perish!
Read in context
- 8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
- 9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- 10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
Cross references
- Psalm 58:7–8 ಕೀರ್ತನೆಗಳು 58:7–8ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ. ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
- Proverbs 10:28 ಜ್ಞಾನೋಕ್ತಿಗಳು 10:28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
- Psalm 86:17 ಕೀರ್ತನೆಗಳು 86:17ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- Luke 13:28 ಲೂಕನು 13:28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
- Job 8:13 ಯೋಬನು 8:13ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
- Psalm 37:12 ಕೀರ್ತನೆಗಳು 37:12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
- Proverbs 11:7 ಜ್ಞಾನೋಕ್ತಿಗಳು 11:7ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.
- Revelation 16:10–11 ಪ್ರಕಟನೆ 16:10–11ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Matthew 22:13 ಮತ್ತಾಯನು 22:13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- Luke 16:23–26 ಲೂಕನು 16:23–26ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
- Matthew 8:12 ಮತ್ತಾಯನು 8:12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Esther 6:11–12 ಎಸ್ತೇರಳು 6:11–12ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು. ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.