Psalms · chapter 114 · verse 4
Psalm 114:4 in Kannada
ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
Bettagalu tagarugala haageyoo guddagalu kurimarigala haageyoo haaraadidavu.
Psalm 114:4 in English
- King James Version (KJV)
- The mountains skipped like rams, [and] the little hills like lambs.
- World English Bible (WEB)
- The mountains skipped like rams, the little hills like lambs.
- American Standard Version (ASV)
- The mountains skipped like rams, The little hills like lambs.
- Bible in Basic English (BBE)
- The mountains were jumping like goats, and the little hills like lambs.
- Darby Translation (DBY)
- The mountains skipped like rams, the hills like lambs.
- Webster's Bible (WBS)
- The mountains skipped like rams, [and] the little hills like lambs.
- Young's Literal Translation (YLT)
- The mountains have skipped as rams, Heights as sons of a flock.
Read in context
- 2ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
- 3ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
- 4ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
- 5ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
- 6ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
Cross references
- Judges 5:4–5 ನ್ಯಾಯಸ್ಥಾಪಕರು 5:4–5ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು. ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
- Exodus 19:18 ವಿಮೋಚನಕಾಂಡ 19:18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Exodus 20:18 ವಿಮೋಚನಕಾಂಡ 20:18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
- Habakkuk 3:6 ಹಬಕ್ಕೂಕ 3:6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Jeremiah 4:23–24 ಯೆರೆಮೀಯ 4:23–24ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
- Habakkuk 3:8 ಹಬಕ್ಕೂಕ 3:8ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
- 2 Peter 3:7–11 2 ಪೇತ್ರನು 3:7–11ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು. ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Psalm 29:6 ಕೀರ್ತನೆಗಳು 29:6ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
- Psalm 18:7 ಕೀರ್ತನೆಗಳು 18:7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
- Micah 1:3–4 ಮೀಕ 1:3–4ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು. ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- Nahum 1:5 ನಹೂಮ 1:5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.