Psalms · chapter 115 · verse 16
Psalm 115:16 in Kannada
ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
Aakaashagalu kartanavugale. Aatanu bhoomi yannu naraputrarige kottiddaane.
Psalm 115:16 in English
- King James Version (KJV)
- The heaven, [even] the heavens, [are] the LORD’s: but the earth hath he given to the children of men.
- World English Bible (WEB)
- The heavens are the LORD’s heavens, but he has given the earth to the children of men.
- American Standard Version (ASV)
- The heavens are the heavens of Jehovah; But the earth hath he given to the children of men.
- Bible in Basic English (BBE)
- The heavens are the Lord's; but the earth he has given to the children of men.
- Darby Translation (DBY)
- The heavens are the heavens of Jehovah, but the earth hath he given to the children of men.
- Webster's Bible (WBS)
- The heaven, [even] the heavens, [are] the LORD'S: but the earth hath he given to the children of men.
- Young's Literal Translation (YLT)
- The heavens — the heavens [are] Jehovah's, And the earth He hath given to sons of men,
Read in context
- 14ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
- 15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- 16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- 17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
- 18ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
Cross references
- Psalm 8:6 ಕೀರ್ತನೆಗಳು 8:6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
- Psalm 89:11 ಕೀರ್ತನೆಗಳು 89:11ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
- Genesis 1:28–30 ಆದಿಕಾಂಡ 1:28–30ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು. ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು. ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- Jeremiah 27:5–6 ಯೆರೆಮೀಯ 27:5–6ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
- Genesis 9:1–3 ಆದಿಕಾಂಡ 9:1–3ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ. ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
- Deuteronomy 32:8 ಧರ್ಮೋಪದೇಶಕಾಂಡ 32:8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Psalm 144:5 ಕೀರ್ತನೆಗಳು 144:5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- John 14:2 ಯೋಹಾನನು 14:2ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
- Psalm 148:4 ಕೀರ್ತನೆಗಳು 148:4ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
- Lamentations 3:66 ಪ್ರಲಾಪಗಳು 3:66ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.