Psalms · chapter 115 · verse 2
Psalm 115:2 in Kannada
ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
Avara devaru elli endu anya janaangagalu yaake helabeku?
Psalm 115:2 in English
- King James Version (KJV)
- Wherefore should the heathen say, Where [is] now their God?
- World English Bible (WEB)
- Why should the nations say, “Where is their God, now?”
- American Standard Version (ASV)
- Wherefore should the nations say, Where is now their God?
- Bible in Basic English (BBE)
- Why may the nations say, Where is now their God?
- Darby Translation (DBY)
- Wherefore should the nations say, Where then is their God?
- Webster's Bible (WBS)
- Why should the heathen say, Where [is] now their God?
- Young's Literal Translation (YLT)
- Why do the nations say, 'Where, pray, [is] their God.
Read in context
- 1ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.
- 2ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
- 3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- 4ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
Cross references
- Psalm 42:3 ಕೀರ್ತನೆಗಳು 42:3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
- Psalm 79:10 ಕೀರ್ತನೆಗಳು 79:10ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Exodus 32:12 ವಿಮೋಚನಕಾಂಡ 32:12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
- Numbers 14:15–16 ಅರಣ್ಯಕಾಂಡ 14:15–16ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು-- ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
- Joel 2:17 ಯೋವೇಲ 2:17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- Deuteronomy 32:26–27 ಧರ್ಮೋಪದೇಶಕಾಂಡ 32:26–27ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
- 2 Kings 19:10–19 2 ಅರಸುಗಳು 19:10–19ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ. ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ? ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು, ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ. ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು. ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ. ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು. ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ. ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು. ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.