Psalms · chapter 118 · verse 24
Psalm 118:24 in Kannada
ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು.
Kartanu maadida dinavu ide; idaralli naavu ullaasisi santoshapaduvevu.
Psalm 118:24 in English
- King James Version (KJV)
- This [is] the day [which] the LORD hath made; we will rejoice and be glad in it.
- World English Bible (WEB)
- This is the day that the LORD has made. We will rejoice and be glad in it!
- American Standard Version (ASV)
- This is the day which Jehovah hath made; We will rejoice and be glad in it.
- Bible in Basic English (BBE)
- This is the day which the Lord has made; we will be full of joy and delight in it.
- Darby Translation (DBY)
- This is the day that Jehovah hath made; we will rejoice and be glad in it.
- Webster's Bible (WBS)
- This [is] the day [which] the LORD hath made; we will rejoice and be glad in it.
- Young's Literal Translation (YLT)
- This [is] the day Jehovah hath made, We rejoice and are glad in it.
Read in context
- 22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- 23ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- 24ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು.
- 25ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
- 26ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
Cross references
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- Isaiah 58:13 ಯೆಶಾಯ 58:13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Nehemiah 8:10 ನೆಹೆಮೀಯ 8:10ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
- 2 Chronicles 20:26–28 2 ಪೂರ್ವಕಾಲವೃತ್ತಾಂತ 20:26–28ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ. ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- 1 Kings 8:66 1 ಅರಸುಗಳು 8:66ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- John 20:19–20 ಯೋಹಾನನು 20:19–20ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
- Acts 20:7 ಅಪೊಸ್ತಲರ ಕೃತ್ಯಗಳು 20:7ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
- Matthew 28:1–8 ಮತ್ತಾಯನು 28:1–8ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ. ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು. ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
- Zechariah 3:9 ಜೆಕರ್ಯ 3:9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.