Psalms · chapter 118 · verse 5
Psalm 118:5 in Kannada
ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
Ikkattinolaginda kartanige koogidenu; kartanu uttara kottu nannannu vishaala sthaladalli nillisi danu.
Psalm 118:5 in English
- King James Version (KJV)
- I called upon the LORD in distress: the LORD answered me, [and set me] in a large place.
- World English Bible (WEB)
- Out of my distress, I called on the LORD. The LORD answered me with freedom.
- American Standard Version (ASV)
- Out of my distress I called upon Jehovah: Jehovah answered me [and set me] in a large place.
- Bible in Basic English (BBE)
- I made my prayer to the Lord in my trouble: and the Lord gave me an answer, and put me in a wide place.
- Darby Translation (DBY)
- I called upon Jah in distress; Jah answered me [and set me] in a large place.
- Webster's Bible (WBS)
- I called upon the LORD in distress: the LORD answered me, [and set me] in a large place.
- Young's Literal Translation (YLT)
- From the straitness I called Jah, Jah answered me in a broad place.
Read in context
- 3ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.
- 4ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
- 5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
- 6ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
- 7ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
Cross references
- Psalm 18:19 ಕೀರ್ತನೆಗಳು 18:19ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Psalm 107:19 ಕೀರ್ತನೆಗಳು 107:19ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- 1 Samuel 30:6–8 1 ಸಮುವೇಲನು 30:6–8ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು. ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು. ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- Psalm 107:13 ಕೀರ್ತನೆಗಳು 107:13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- Psalm 40:1–3 ಕೀರ್ತನೆಗಳು 40:1–3ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Psalm 116:3–4 ಕೀರ್ತನೆಗಳು 116:3–4ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- Mark 14:31–36 ಮಾರ್ಕನು 14:31–36ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು. ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು. ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- Psalm 77:2 ಕೀರ್ತನೆಗಳು 77:2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.