Psalms · chapter 118 · verse 9
Psalm 118:9 in Kannada
ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
Adhipatigalalli bharavasaviduvadakkinta kartanannu nambikolluvadu olledu.
Psalm 118:9 in English
- King James Version (KJV)
- [It is] better to trust in the LORD than to put confidence in princes.
- World English Bible (WEB)
- It is better to take refuge in the LORD, than to put confidence in princes.
- American Standard Version (ASV)
- It is better to take refuge in Jehovah Than to put confidence in princes.
- Bible in Basic English (BBE)
- It is better to have faith in the Lord than to put one's hope in rulers.
- Darby Translation (DBY)
- It is better to trust in Jehovah than to put confidence in nobles.
- Webster's Bible (WBS)
- [It is] better to trust in the LORD than to put confidence in princes.
- Young's Literal Translation (YLT)
- Better to take refuge in Jehovah, Than to trust in princes.
Read in context
- 7ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
- 8ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
- 9ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- 10ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು.
- 11ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು.
Cross references
- Psalm 146:3–5 ಕೀರ್ತನೆಗಳು 146:3–5ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ. ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Ezekiel 29:7 ಯೆಹೆಜ್ಕೇಲನು 29:7ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- Isaiah 30:2–3 ಯೆಶಾಯ 30:2–3ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
- Isaiah 31:8 ಯೆಶಾಯ 31:8ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Isaiah 30:15–17 ಯೆಶಾಯ 30:15–17ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ. ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು. ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
- Isaiah 36:6–7 ಯೆಶಾಯ 36:6–7ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ. ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?