Psalms · chapter 119 · verse 100
Psalm 119:100 in Kannada
ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
Naanu poorvikariginta vivekiyaagiddene; ninna kattalegalannu kaikondiddene.
Psalm 119:100 in English
- King James Version (KJV)
- I understand more than the ancients, because I keep thy precepts.
- World English Bible (WEB)
- I understand more than the aged, because I have kept your precepts.
- American Standard Version (ASV)
- I understand more than the aged, Because I have kept thy precepts.
- Bible in Basic English (BBE)
- I have more wisdom than the old, because I have kept your orders.
- Darby Translation (DBY)
- I understand more than the aged, because I have observed thy precepts.
- Webster's Bible (WBS)
- I understand more than the ancients, because I keep thy precepts.
- Young's Literal Translation (YLT)
- Above elders I understand more, For Thy precepts I have kept.
Read in context
- 98ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
- 99ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
- 100ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- 101ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
- 102ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ.
Cross references
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Job 15:9–10 ಯೋಬನು 15:9–10ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ? ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- Job 12:12 ಯೋಬನು 12:12ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
- Jeremiah 8:8–9 ಯೆರೆಮೀಯ 8:8–9ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ. ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- Job 32:4 ಯೋಬನು 32:4ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
- 1 Kings 12:6–15 1 ಅರಸುಗಳು 12:6–15ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು. ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು. ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು. ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು. ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ-- ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು. ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು. ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ-- ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
- Matthew 7:24 ಮತ್ತಾಯನು 7:24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- Job 32:7–10 ಯೋಬನು 32:7–10ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು. ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ. ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ. ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.