Psalms · chapter 119 · verse 125
Psalm 119:125 in Kannada
ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
Naanu ninna sevakanu; ninna saakshigalannu tiliyuva haage nanage grahikeyannu kodu.
Psalm 119:125 in English
- King James Version (KJV)
- I [am] thy servant; give me understanding, that I may know thy testimonies.
- World English Bible (WEB)
- I am your servant. Give me understanding, that I may know your testimonies.
- American Standard Version (ASV)
- I am thy servant; give me understanding, That I may know thy testimonies.
- Bible in Basic English (BBE)
- I am your servant; give me wisdom, so that I may have knowledge of your unchanging word.
- Darby Translation (DBY)
- I am thy servant; give me understanding that I may know thy testimonies.
- Webster's Bible (WBS)
- I [am] thy servant; give me understanding, that I may know thy testimonies.
- Young's Literal Translation (YLT)
- Thy servant [am] I — cause me to understand, And I know Thy testimonies.
Read in context
- 123ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
- 124ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
- 125ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
- 126ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
- 127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
Cross references
- James 3:13–17 ಯಾಕೋಬನು 3:13–17ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- Psalm 119:34 ಕೀರ್ತನೆಗಳು 119:34ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
- 2 Corinthians 3:5–6 2 ಕೊರಿಂಥದವರಿಗೆ 3:5–6ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು; ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Psalm 119:29 ಕೀರ್ತನೆಗಳು 119:29ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Psalm 119:18–19 ಕೀರ್ತನೆಗಳು 119:18–19ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು. ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
- Psalm 119:66 ಕೀರ್ತನೆಗಳು 119:66ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Proverbs 9:10 ಜ್ಞಾನೋಕ್ತಿಗಳು 9:10ಪರಿಶುದ್ಧರ ತಿಳುವಳಿಕೆಯೇ ವಿವೇಕವು.