Psalms · chapter 119 · verse 19
Psalm 119:19 in Kannada
ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
Naanu bhoomiyalli paradeshasthanaagiddene; ninna aajnye galannu nanage maremaadabeda.
Psalm 119:19 in English
- King James Version (KJV)
- I [am] a stranger in the earth: hide not thy commandments from me.
- World English Bible (WEB)
- I am a stranger on the earth. Don’t hide your commandments from me.
- American Standard Version (ASV)
- I am a sojourner in the earth: Hide not thy commandments from me.
- Bible in Basic English (BBE)
- I am living in a strange land: do not let your teachings be kept secret from me.
- Darby Translation (DBY)
- I am a stranger in the land; hide not thy commandments from me.
- Webster's Bible (WBS)
- I [am] a stranger in the earth: hide not thy commandments from me.
- Young's Literal Translation (YLT)
- A sojourner I [am] on earth, Hide not from me Thy commands.
Read in context
- 17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
- 18ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
- 19ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
- 20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- 21ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
Cross references
- 1 Chronicles 29:15 1 ಪೂರ್ವಕಾಲವೃತ್ತಾಂತ 29:15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
- Psalm 39:12 ಕೀರ್ತನೆಗಳು 39:12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Hebrews 11:13–16 ಇಬ್ರಿಯರಿಗೆ 11:13–16ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Psalm 119:10 ಕೀರ್ತನೆಗಳು 119:10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- 2 Corinthians 5:6 2 ಕೊರಿಂಥದವರಿಗೆ 5:6ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ;
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Luke 24:45 ಲೂಕನು 24:45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Isaiah 63:17 ಯೆಶಾಯ 63:17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- Luke 9:45 ಲೂಕನು 9:45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- Job 39:17 ಯೋಬನು 39:17ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.