Psalms · chapter 119 · verse 21
Psalm 119:21 in Kannada
ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
Ninna aajnyegalinda tappihoguva shaapagrastharaada ahankaarigalannu neenu gadarisiddee.
Psalm 119:21 in English
- King James Version (KJV)
- Thou hast rebuked the proud [that are] cursed, which do err from thy commandments.
- World English Bible (WEB)
- You have rebuked the proud who are cursed, who wander from your commandments.
- American Standard Version (ASV)
- Thou hast rebuked the proud that are cursed, That do wander from thy commandments.
- Bible in Basic English (BBE)
- Your hand has been against the men of pride, a curse is on those who go wandering out of your way.
- Darby Translation (DBY)
- Thou hast rebuked the proud [that are] cursed, who wander from thy commandments.
- Webster's Bible (WBS)
- Thou hast rebuked the proud [that are] cursed, who do err from thy commandments.
- Young's Literal Translation (YLT)
- Thou hast rebuked the cursed proud, Who are erring from Thy commands.
Read in context
- 19ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
- 20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- 21ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
- 22ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
- 23ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
Cross references
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Psalm 119:10 ಕೀರ್ತನೆಗಳು 119:10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- Psalm 119:118 ಕೀರ್ತನೆಗಳು 119:118ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Deuteronomy 30:19 ಧರ್ಮೋಪದೇಶಕಾಂಡ 30:19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Psalm 119:110 ಕೀರ್ತನೆಗಳು 119:110ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
- Jeremiah 44:28–29 ಯೆರೆಮೀಯ 44:28–29ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು. ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Deuteronomy 28:15 ಧರ್ಮೋಪದೇಶಕಾಂಡ 28:15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- Ezekiel 28:2–10 ಯೆಹೆಜ್ಕೇಲನು 28:2–10ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ. ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ. ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ; ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ; ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು. ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ. ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ; ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
- Isaiah 42:24 ಯೆಶಾಯ 42:24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.