Psalms · chapter 119 · verse 34
Psalm 119:34 in Kannada
ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
Nanage grahikeyannu kodu; aaga ninna nyaayapramaanavannu kaikondu haudu, poornahrudayadinda adannu kaikolluvenu.
Psalm 119:34 in English
- King James Version (KJV)
- Give me understanding, and I shall keep thy law; yea, I shall observe it with [my] whole heart.
- World English Bible (WEB)
- Give me understanding, and I will keep your law. Yes, I will obey it with my whole heart.
- American Standard Version (ASV)
- Give me understanding, and I shall keep thy law; Yea, I shall observe it with my whole heart.
- Bible in Basic English (BBE)
- Give me wisdom, so that I may keep your law; going after it with all my heart.
- Darby Translation (DBY)
- Give me understanding, and I will observe thy law; and I will keep it with [my] whole heart.
- Webster's Bible (WBS)
- Give me understanding, and I shall keep thy law; yes, I shall observe it with [my] whole heart.
- Young's Literal Translation (YLT)
- Cause me to understand, and I keep Thy law, And observe it with the whole heart.
Read in context
- 32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- 33ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
- 34ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
- 35ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
- 36ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
Cross references
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Matthew 7:24 ಮತ್ತಾಯನು 7:24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- Proverbs 2:5–6 ಜ್ಞಾನೋಕ್ತಿಗಳು 2:5–6ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Psalm 119:73 ಕೀರ್ತನೆಗಳು 119:73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- James 1:25 ಯಾಕೋಬನು 1:25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- James 2:8–12 ಯಾಕೋಬನು 2:8–12ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ. ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ. ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ. ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
- Psalm 119:10 ಕೀರ್ತನೆಗಳು 119:10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- Psalm 119:69 ಕೀರ್ತನೆಗಳು 119:69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- James 3:13–18 ಯಾಕೋಬನು 3:13–18ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Matthew 5:19 ಮತ್ತಾಯನು 5:19ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.