Psalms · chapter 119 · verse 4
Psalm 119:4 in Kannada
ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
Ninna kattalegalannu jaagrateyaagi kaikolla bekendu neenu aajnyaapisiddee.
Psalm 119:4 in English
- King James Version (KJV)
- Thou hast commanded [us] to keep thy precepts diligently.
- World English Bible (WEB)
- You have commanded your precepts, that we should fully obey them.
- American Standard Version (ASV)
- Thou hast commanded [us] thy precepts, That we should observe them diligently.
- Bible in Basic English (BBE)
- You have put your orders into our hearts, so that we might keep them with care.
- Darby Translation (DBY)
- Thou hast enjoined thy precepts, to be kept diligently.
- Webster's Bible (WBS)
- Thou hast commanded [us] to keep thy precepts diligently.
- Young's Literal Translation (YLT)
- Thou hast commanded us Thy precepts to keep diligently,
Read in context
- 2ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
- 3ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.
- 4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
- 5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
- 6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
Cross references
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Jeremiah 7:23 ಯೆರೆಮೀಯ 7:23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Deuteronomy 28:1–14 ಧರ್ಮೋಪದೇಶಕಾಂಡ 28:1–14ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು. ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ. ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು. ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು. ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ. ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Philippians 4:8–9 ಫಿಲಿಪ್ಪಿಯವರಿಗೆ 4:8–9ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- Deuteronomy 30:16 ಧರ್ಮೋಪದೇಶಕಾಂಡ 30:16ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- Joshua 1:7 ಯೆಹೋಶುವ 1:7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- Deuteronomy 11:22 ಧರ್ಮೋಪದೇಶಕಾಂಡ 11:22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
- Deuteronomy 4:1 ಧರ್ಮೋಪದೇಶಕಾಂಡ 4:1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.