Psalms · chapter 119 · verse 46
Psalm 119:46 in Kannada
ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
Ninna saakshigalannu kuritu arasara munde maatanaadu ttene, naachikepaduvadilla.
Psalm 119:46 in English
- King James Version (KJV)
- I will speak of thy testimonies also before kings, and will not be ashamed.
- World English Bible (WEB)
- I will also speak of your statutes before kings, and will not be disappointed.
- American Standard Version (ASV)
- I will also speak of thy testimonies before kings, And shall not be put to shame.
- Bible in Basic English (BBE)
- So that I may give knowledge of your unchanging word before kings, and not be put to shame.
- Darby Translation (DBY)
- And I will speak of thy testimonies before kings, and will not be ashamed;
- Webster's Bible (WBS)
- I will speak of thy testimonies also before kings, and will not be ashamed.
- Young's Literal Translation (YLT)
- And I speak of Thy testimonies before kings, And I am not ashamed.
Read in context
- 44ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು.
- 45ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
- 46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- 47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
- 48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
Cross references
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Matthew 10:18–19 ಮತ್ತಾಯನು 10:18–19ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
- Acts 26:1–2 ಅಪೊಸ್ತಲರ ಕೃತ್ಯಗಳು 26:1–2ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ-- ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
- Mark 8:38 ಮಾರ್ಕನು 8:38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Daniel 4:25–27 ದಾನಿಯೇಲನು 4:25–27ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು. ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು. ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- Daniel 4:1–3 ದಾನಿಯೇಲನು 4:1–3ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ. ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
- Acts 26:24–29 ಅಪೊಸ್ತಲರ ಕೃತ್ಯಗಳು 26:24–29ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು. ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ. ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ. ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು. ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು. ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
- Psalm 138:1 ಕೀರ್ತನೆಗಳು 138:1ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
- 1 Peter 4:14–16 1 ಪೇತ್ರನು 4:14–16ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- Daniel 3:16–18 ದಾನಿಯೇಲನು 3:16–18ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.