Psalms · chapter 119 · verse 63
Psalm 119:63 in Kannada
ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
Ninage bhayapaduvavarellarigoo ninna kattalega lannu kaikolluvavarigoo, naanu sangadiganaagiddene.
Psalm 119:63 in English
- King James Version (KJV)
- I [am] a companion of all [them] that fear thee, and of them that keep thy precepts.
- World English Bible (WEB)
- I am a friend of all those who fear you, of those who observe your precepts.
- American Standard Version (ASV)
- I am a companion of all them that fear thee, And of them that observe thy precepts.
- Bible in Basic English (BBE)
- I keep company with all your worshippers, and those who have your orders in their memory.
- Darby Translation (DBY)
- I am the companion of all that fear thee, and of them that keep thy precepts.
- Webster's Bible (WBS)
- I [am] a companion of all [them] that fear thee, and of them that keep thy precepts.
- Young's Literal Translation (YLT)
- A companion I [am] to all who fear Thee, And to those keeping Thy precepts.
Read in context
- 61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
- 62ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
- 63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- 64ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
- 65ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
Cross references
- Psalm 101:6 ಕೀರ್ತನೆಗಳು 101:6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Malachi 3:16–18 ಮಲಾಕಿಯ 3:16–18ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು. ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ. ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- 1 John 1:3 1 ಯೋಹಾನನು 1:3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- Psalm 119:79 ಕೀರ್ತನೆಗಳು 119:79ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
- Psalm 142:7 ಕೀರ್ತನೆಗಳು 142:7ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- 1 John 3:14 1 ಯೋಹಾನನು 3:14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- 2 Corinthians 6:14–17 2 ಕೊರಿಂಥದವರಿಗೆ 6:14–17ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.