Psalms · chapter 119 · verse 67
Psalm 119:67 in Kannada
ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
Naanu shramepadu vadakkinta munche tappihoguttiddenu; aadare eega ninna vaakyavannu kaikondiddene.
Psalm 119:67 in English
- King James Version (KJV)
- Before I was afflicted I went astray: but now have I kept thy word.
- World English Bible (WEB)
- Before I was afflicted, I went astray; but now I observe your word.
- American Standard Version (ASV)
- Before I was afflicted I went astray; But now I observe thy word.
- Bible in Basic English (BBE)
- Before I was in trouble I went out of the way; but now I keep your word.
- Darby Translation (DBY)
- Before I was afflicted I went astray, but now I keep thy *word.
- Webster's Bible (WBS)
- Before I was afflicted I went astray: but now have I kept thy word.
- Young's Literal Translation (YLT)
- Before I am afflicted, I — I am erring, And now Thy saying I have kept.
Read in context
- 65ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
- 66ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
- 67ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
- 68ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.
- 69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
Cross references
- Jeremiah 31:18–19 ಯೆರೆಮೀಯ 31:18–19ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- Psalm 119:75 ಕೀರ್ತನೆಗಳು 119:75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Hebrews 12:5–11 ಇಬ್ರಿಯರಿಗೆ 12:5–11ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- Hosea 2:6–7 ಹೋಶೇಯ 2:6–7ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು. ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
- Jeremiah 22:21 ಯೆರೆಮೀಯ 22:21ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
- 2 Samuel 11:2–27 2 ಸಮುವೇಲನು 11:2–27ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು. ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು. ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು. ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು. ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು. ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು. ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು. ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು. ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು. ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು. ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು. ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು. ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು. ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು. ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು. ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ-- ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು-- ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು? ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು. ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು. ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು. ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು. ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು. ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು. ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Proverbs 1:32 ಜ್ಞಾನೋಕ್ತಿಗಳು 1:32ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.