Psalms · chapter 119 · verse 73
Psalm 119:73 in Kannada
ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
Ninna kaigalu nannannu roopisi nirmisidavu; ninna aajnyegalannu kalitukolluva haage grahikeyannu nanage kodu.
Psalm 119:73 in English
- King James Version (KJV)
- Thy hands have made me and fashioned me: give me understanding, that I may learn thy commandments.
- World English Bible (WEB)
- Your hands have made me and formed me. Give me understanding, that I may learn your commandments.
- American Standard Version (ASV)
- Thy hands have made me and fashioned me: Give me understanding, that I may learn thy commandments.
- Bible in Basic English (BBE)
- JOD Your hands have made me, and given me form: give me wisdom, so that I may have knowledge of your teaching.
- Darby Translation (DBY)
- YOD. Thy hands have made me and fashioned me: give me understanding, and I will learn thy commandments.
- Webster's Bible (WBS)
- JOD. Thy hands have made me and fashioned me: give me understanding, that I may learn thy commandments.
- Young's Literal Translation (YLT)
- [Yod.] Thy hands made me and establish me, Cause me to understand, and I learn Thy commands.
Read in context
- 71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- 72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- 73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- 74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- 75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
Cross references
- Psalm 139:14–16 ಕೀರ್ತನೆಗಳು 139:14–16ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ; ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ. ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- Psalm 138:8 ಕೀರ್ತನೆಗಳು 138:8ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Job 31:15 ಯೋಬನು 31:15ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- 2 Timothy 2:7 2 ತಿಮೊಥೆಯನಿಗೆ 2:7ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
- Psalm 119:125 ಕೀರ್ತನೆಗಳು 119:125ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
- Job 32:8 ಯೋಬನು 32:8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Psalm 119:34 ಕೀರ್ತನೆಗಳು 119:34ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Psalm 119:169 ಕೀರ್ತನೆಗಳು 119:169ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.
- 2 Chronicles 2:12 2 ಪೂರ್ವಕಾಲವೃತ್ತಾಂತ 2:12ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.