Psalms · chapter 119 · verse 99
Psalm 119:99 in Kannada
ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
Nanna bodhakarellariginta naanu buddhivanta naagiddene; ninna saakshigalu nanna dhyaanavaagive.
Psalm 119:99 in English
- King James Version (KJV)
- I have more understanding than all my teachers: for thy testimonies [are] my meditation.
- World English Bible (WEB)
- I have more understanding than all my teachers, for your testimonies are my meditation.
- American Standard Version (ASV)
- I have more understanding than all my teachers; For thy testimonies are my meditation.
- Bible in Basic English (BBE)
- I have more knowledge than all my teachers, because I give thought to your unchanging word.
- Darby Translation (DBY)
- I have more understanding than all my teachers; for thy testimonies are my meditation.
- Webster's Bible (WBS)
- I have more understanding than all my teachers: for thy testimonies [are] my meditation.
- Young's Literal Translation (YLT)
- Above all my teachers I have acted wisely. For Thy testimonies [are] my meditation.
Read in context
- 97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- 98ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
- 99ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
- 100ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- 101ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
Cross references
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Psalm 119:24 ಕೀರ್ತನೆಗಳು 119:24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Matthew 23:24–36 ಮತ್ತಾಯನು 23:24–36ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- 2 Chronicles 29:15–36 2 ಪೂರ್ವಕಾಲವೃತ್ತಾಂತ 29:15–36ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು. ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು. ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು. ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು. ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು. ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು. ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು. ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು. ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು. ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು, ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು. ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು. ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು. ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು. ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು. ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು. ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು. ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು. ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು. ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
- 2 Chronicles 30:22 2 ಪೂರ್ವಕಾಲವೃತ್ತಾಂತ 30:22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
- Jeremiah 2:8 ಯೆರೆಮೀಯ 2:8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
- Hebrews 5:12 ಇಬ್ರಿಯರಿಗೆ 5:12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- Jeremiah 8:8–9 ಯೆರೆಮೀಯ 8:8–9ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ. ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- Matthew 15:6–9 ಮತ್ತಾಯನು 15:6–9ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ. ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು; ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- 1 Chronicles 15:11–13 1 ಪೂರ್ವಕಾಲವೃತ್ತಾಂತ 15:11–13ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ-- ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ. ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.